SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Prasthutha|

ಬೆಳ್ತಂಗಡಿ: SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆಯಾಗಿದ್ದಾರೆ.

- Advertisement -

ಮುಂಬರುವ ಬೆಳ್ತಂಗಡಿ ವಿಧಾನಸಭಾ ಚುನಾವಣೆ ಪೂರ್ವ ತಯಾರಿ ಬಗ್ಗೆ ಪಕ್ಷದ ಕಛೇರಿಯಲ್ಲಿ ಡಿ.16 ಶುಕ್ರವಾರದಂದು ಸಭೆ ನಡೆಸಲಾಯಿತು. ಪ್ರತಿ ಬೂತ್ ಸಮಿತಿ ಮಟ್ಟದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ಮತ್ತು ಚುನಾವಣೆಯಲ್ಲಿ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯಾಚಟುವಟಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಈ ವೇಳೆ ಜಿಲ್ಲಾ ನಾಯಕರ  ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ನೂತನ ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಇವರನ್ನು ಆಯ್ಕೆ ಮಾಡಲಾಯಿತು.

      ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸದಾತ್ ಬಜತ್ತೂರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಅಸೆಂಬ್ಲಿ ಸಮಿತಿ , ಬ್ಲಾಕ್ ಸಮಿತಿ ಹಾಗೂ ಗ್ರಾಮ ಸಮಿತಿ ನಾಯಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಸ್ವಾಗತಿಸಿ, ಅಶ್ರಪ್ ಕಟ್ಟೆ ವಂದಿಸಿದರು.

Join Whatsapp