Home ಟಾಪ್ ಸುದ್ದಿಗಳು ಕರಾವಳಿಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಶಂಕೆ: ಶೋಧ ಕಾರ್ಯಾಚರಣೆ

ಕರಾವಳಿಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಶಂಕೆ: ಶೋಧ ಕಾರ್ಯಾಚರಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತಿದ್ದು, ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.


ಈದು ಗ್ರಾಮದಲ್ಲಿ ಕೆಲ ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳ ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಈ ಸಂಬಂಧ ಸ್ಥಳೀಯರ ಬಳಿ ಎಎನ್ ಎಫ್ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದೆ. ಆದರೆ, ನಕ್ಸಲ್ ಓಡಾಟದ ಬಗ್ಗೆ ಸ್ಥಳೀಯರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.

ಪಶ್ಚಿಮಘಟ್ಟದ ತಪ್ಪಲಿನಲ್ಲಿ ನಕ್ಸಲರು ನುಸುಳಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ನಕ್ಸಲ್ ಬಗ್ಗೆ ಅರಣ್ಯವಾಸಿಗಳಿಂದಲೂ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಡ್ರೋಣ್, ಶ್ವಾನದಳ ಸಿಬ್ಬಂದಿ ಬಳಸಿಕೊಂಡು ಶೋಧ ಕಾರ್ಯ ನಡೆಸಲಾಗುತ್ತಿದೆ.


ನಕ್ಸಲ್ ಓಡಾಟದ ಬಗ್ಗೆ ಈವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಸಾರ್ವಜನಿಕರು ಆತಂಕಪಡುವುದು ಬೇಡ ಎಂದು ಎಎನ್ಎಫ್ ಅಧಿಕಾರಿಗಳು ಸ್ಥಳೀಯರಿಗೆ ಧೈರ್ಯ ತುಂಬಿದ್ದಾರೆ.

Join Whatsapp
Exit mobile version