ಛತ್ತೀಸ್‌ಘಡದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ನಕ್ಸಲರ ದಾಳಿ | ಮೂರು ಬಲಿ
Prasthutha: March 23, 2021

ಛತ್ತೀಸ್‌ಘಡದಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬಾಂಬ್ ದಾಳಿ ನಡೆಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಛತ್ತೀಸ್‌ಘಡದ ನಾರಾಯಣಪುರ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ.
ಘಟನೆಯಲ್ಲಿ ಮೂರು ಜನರು ಸಾವನ್ನಪ್ಪಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಇದು ನಕ್ಸಲರು ನಡೆಸಿದ ದಾಳಿಯಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. ಮಾವೋವಾದಿಗಳ ಪ್ರಾಬಲ್ಯವಿರುವ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಹಿಂದಿರುಗುತ್ತಿದ್ದ ಗುಂಪನ್ನು ಗುರಿಯಾಗಿಸಿ ಈ ಸ್ಫೋಟ ನಡೆಸಲಾಗಿದೆ ಎಂದು ಛತ್ತೀಸ್‌ಘಡದ ಡಿಜಿಪಿ ಡಿಎಂ ಅವಸ್ಥಿ ಹೇಳಿದ್ದಾರೆ. ದಾಳಿಯ ಸಂದರ್ಭ 20 ಕ್ಕೂ ಹೆಚ್ಚು ಜನರು ಬಸ್‌ನಲ್ಲಿದ್ದರು ಎಂದು ಅವರು ಹೇಳಿದ್ದಾರೆ.
