Home ಟಾಪ್ ಸುದ್ದಿಗಳು ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಕಡಬ: ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.


ನಕ್ಸಲರು ಚೆರು ಗ್ರಾಮದ ಮನೆಯೊಂದಕ್ಕೆ ತೆರಳಿ, ಎರಡು ಗಂಟೆಗಳ ಕಾಲ ಅಲ್ಲೇ ಕಾಲ ಕಳೆದಿದ್ದಾರೆ. ನಂತರ ಅದೇ ಮನೆಯಲ್ಲಿ ಊಟ ಮಾಡಿ ಬಳಿಕ ದಿನಸಿ ಸಾಮಗ್ರಿ ಪಡೆದಿರುವ ಮಾಡಿರುವ ಮಾಹಿತಿ ದೊರೆತಿದೆ.

ಗ್ರಾಮಕ್ಕೆ ಭೇಟಿ ನೀಡಿದ್ದ ತಂಡದಲ್ಲಿ ಮೋಸ್ಟ್ ವಾಂಟೆಡ್ ವಿಕ್ರಂಗೌಡ, ಲತಾ ಇದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ನಕ್ಸಲರು ಇದ್ದ ಮನೆಗೆ ನಕ್ಸಲ್ ನಿಗ್ರಹ ಪಡೆ (ANF) ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. 2012ರಲ್ಲಿ ಈ ಪ್ರದೇಶದ ಹತ್ತಿರದಲ್ಲೇ ನಕ್ಸಲರ ಶೂಟೌಟ್ ನಡೆದಿತ್ತು. ನಕ್ಸಲರು ಮಾರ್ಚ್ 16 ರಂದು ಕೂಜಿಮಲೆ, ಮಾ.23 ರಂದು ಸುಬ್ರಹ್ಮಣ್ಯದ ಐನೆಕಿದು ಬಂದು ಹೋಗಿದ್ದರು.

Join Whatsapp
Exit mobile version