Home ಟಾಪ್ ಸುದ್ದಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಸ್ವತಂತ್ರ ಸ್ಪರ್ಧೆ: ಅಜಿತ್ ಪವಾರ್

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಸ್ವತಂತ್ರ ಸ್ಪರ್ಧೆ: ಅಜಿತ್ ಪವಾರ್

ಪುಣೆ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ನೇತೃತ್ವದ ಎನ್‌ಸಿಪಿ ಸೇರಿದಂತೆ ಮಹಾಯುತಿ ಮೈತ್ರಿಕೂಟ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲು ಮುಕ್ತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ನಾವು ಮಿತ್ರರಾಗಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಮಹಾಯುತಿ ಸದಸ್ಯರು ಸ್ವತಂತ್ರರು ಎಂದು ಅವರು ಹೇಳಿದರು.

ಮುನ್ಸಿಪಲ್ ಕೌನ್ಸಿಲ್, ನಗರ ಪಂಚಾಯತ್ ಮತ್ತು ಜಿಲ್ಲಾ ಪರಿಷತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಿವೆ.

Join Whatsapp
Exit mobile version