ಶಿವಸೇನೆ ನೇತೃತ್ವದ ಎಂವಿಎ ಸರ್ಕಾರ ಪತನಗೊಂಡರೆ ಎನ್ ಸಿಪಿ ಪ್ರತಿಪಕ್ಷದಲ್ಲಿರುತ್ತದೆ: ಜಯಂತ್ ಪಾಟೀಲ್

Prasthutha|

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಗೊಂಡರೆ ಎನ್ ಸಿಪಿ ಪ್ರತಿಪಕ್ಷ ಸೇರಲು ಬಯಸುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ನಾಯಕ ಜಯಂತ್ ಪಾಟೀಲ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

- Advertisement -

ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಇಂದು ಎನ್ ಸಿಪಿ ಸಭೆ ನಡೆದ ನಂತರ ಅವರ ಹೇಳಿಕೆ ಬಂದಿದೆ.

ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ರಾಜಕೀಯ ಅಸ್ಥಿರತೆಯ ನಡುವೆ, ಎನ್ಸಿಪಿ ನಾಯಕ ಶರದ್ ಪವಾರ್ ಅವರು ಸರ್ಕಾರ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡಲು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

Join Whatsapp