ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪರಿಷ್ಕರಣೆಗೆ ಕೇಂದ್ರಕ್ಕೆ ಮನವಿ: ಆರ್. ಅಶೋಕ

Prasthutha|

ಬೆಳಗಾವಿ: ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ನು ಪರಿಷ್ಕರಿಸಿ ಬೆಳೆ ಪರಿಹಾರ ಮೊತ್ತವನ್ನು ಹೆಚ್ಚಿಸಿ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಮಂಗಳವಾರ ಮೇಲ್ಮನೆಯಲ್ಲಿ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳ ಪರಿಹಾರ ಪಾವತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಒಂದು ಹೆಕ್ಟೇರ್ ಖುಷ್ಕಿ ಪ್ರದೇಶದ ಕೃಷಿ ಬೆಳೆ ಹಾನಿಗೆ 6800 ರೂ., ನೀರಾವರಿ ಕ್ಷೇತ್ರಕ್ಕೆ 13500 ರೂ. ಹಾಗೂ ಬಹು ವಾರ್ಷಿಕ ಬೆಳೆಗೆ 18000 ರೂ.ಗಳಂತೆ ಪರಿಹಾರ ಪಾವತಿಸಲಾಗುತ್ತಿದೆ. 12 ಲಕ್ಷ ರೈತರಿಗೆ 787 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ಪರಿಹಾರ ದರ ಪರಿಷ್ಕೃತಗೊಳ್ಳುತ್ತಿದೆ.
2015 ರಲ್ಲಿ ದರ ಪರಿಷ್ಕೃತಗೊಂಡಿರುತ್ತದೆ. ಪರಿಹಾರ ಧನ ಪರಿಷ್ಕರಿಸಿ ಹೆಚ್ಚಿನ ಪರಿಹಾರ ನಿಗದಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ಸದನಕ್ಕೆ ತಿಳಿಸಿದರು.



Join Whatsapp