ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಕೊರತೆ ಸಮಸ್ಯೆಯನ್ನು ನೀಗಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ ಎಂದಿದ್ದಾರೆ.