ಕೋವಿಡ್ ತಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ – ಸಚಿವ ಎ.ನಾರಾಯಣಸ್ವಾಮಿ

Prasthutha|

ರಾಮನಗರ: ದೇಶದಲ್ಲಿ ಮರುಕಳಿಸುತ್ತಿರುವ ಕೋವಿಡ್ ತಡೆಗಟ್ಟಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

- Advertisement -

ರಾಮನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಹಲವು ಕುಟುಂಬಗಳು ತಮ್ಮ ಸದಸ್ಯರನ್ನು ಕಳೆದುಕೊಂಡು ನೋವನ್ನು ಅನುಭವಿಸಿರುವುದನ್ನು ನಾವು ನೋಡುತ್ತಿದ್ದೇವೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋವಿಡ್ ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಅದರ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ಡಿ.24 ರಿಂದ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದರು.

ಹಿಂದಿನ ಸರ್ಕಾರ ಎಸ್ಸಿ ಎಸ್ಟಿ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ 200 ಕೋಟಿ ನಿಗದಿ ಮಾಡಿತ್ತು, ಪ್ರಧಾನಿ ಮೋದಿಯವರು 600 ಕೋಟಿ ಮೀಸಲಿಟ್ಟಿದ್ದಾರೆ ಎಂದರು.



Join Whatsapp