ಕೇಂದ್ರದಲ್ಲಿ ಹೊಸ ‘ಸಮ್ಮಿಶ್ರ ಸರ್ಕಾರ’ ಬೇಕು: ಉದ್ಧವ್ ಠಾಕ್ರೆ

Prasthutha|

ಮುಂಬೈ: ದೇಶದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೊಂದುವ ಸಮಯ ಬಂದಿದೆ, ಅದು ಎಲ್ಲರನ್ನೂ ಜೊತೆಗೆ ಕರೆದೊಯ್ಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

- Advertisement -

ಮಂಗಳವಾರ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಪಕ್ಷದ ಸಾಂಪ್ರದಾಯಿಕ ವಾರ್ಷಿಕ ದಸರಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ, ”ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬದಲಾವಣೆಯಾಗಬೇಕು” ಎಂದು ಹೇಳಿದರು.

”ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪೂರ್ಣ ಬಹುಮತದ ಸರ್ಕಾರವನ್ನು ಭಾರತ ಕಂಡಿದೆ, ಅದು ನಿರಂಕುಶಾಧಿಕಾರ ಅಥವಾ ಕ್ರೂರ ರೀತಿಯಲ್ಲಿ ವರ್ತಿಸುತ್ತ ಬಂದಿದೆ. ಈಗ ದೇಶದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೊಂದುವ ಸಮಯ ಬಂದಿದೆ, ಅದು ಎಲ್ಲರನ್ನೂ ಜೊತೆಗೆ ಕರೆದೊಯ್ಯುತ್ತದೆ” ಎಂದು 2024ರ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಠಾಕ್ರೆ ಹೇಳಿದರು