Home ಟಾಪ್ ಸುದ್ದಿಗಳು ಭೂಕಂಪದ ಎಚ್ಚರಿಕೆ ನೀಡುವ ತಂತ್ರಜ್ಞಾನದ ಅಭಿವೃದ್ಧಿ ಅಗತ್ಯವಿದೆ: ಪ್ರಧಾನಿ ಮೋದಿ

ಭೂಕಂಪದ ಎಚ್ಚರಿಕೆ ನೀಡುವ ತಂತ್ರಜ್ಞಾನದ ಅಭಿವೃದ್ಧಿ ಅಗತ್ಯವಿದೆ: ಪ್ರಧಾನಿ ಮೋದಿ

0

ನವದೆಹಲಿ: ಸುಧಾರಿತ ಹವಾಮಾನ ವಿಜ್ಞಾನವು ಪಾಕೃತಿಕ ವಿಕೋಪಗಳಿಂದ ಆಗುವ ಹಾನಿಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಅದೇ ರೀತಿ ಭೂಕಂಪನದ ಎಚ್ಚರಿಕೆ ನೀಡುವ ತಂತ್ರಜ್ಞಾನವನ್ನೂ ಅಭಿವೃದ್ದಿಪಡಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತೀಯ ಹವಾಮಾನ ಇಲಾಖೆಯ 150 ನೇ ವರ್ಷಾಚರಣೆಯಲ್ಲಿ ಪಾಲ್ಗೊಂಡು, ‘ಮಿಷನ್ ಮ್ಯೂಸಿಯಂ’ ಯೋಜನೆಗೆ ಚಾಲನೆ ನೀಡಿದರು.

ಅತ್ಯಾಧುನಿಕ ಹವಾಮಾನ ಕಣ್ಗಾವಲು ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದು, ಹೆಚ್ಚಿನ ರೆಸಲ್ಯೂಶನ್‌ನ ವಾತಾವರಣ ವೀಕ್ಷಣೆಯ ಸಾಧನಗಳು, ಮುಂದಿನ ಪೀಳಿಗೆಯ ರಾಡಾರ್‌, ಉಪಗ್ರಹಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟರ್‌ಗಳನ್ನು ಕಾರ್ಯಗತಗೊಳಿಸುವುದು ಇದರ ಉದ್ದೇಶವಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version