ಪ್ಯಾರಿಸ್: ಇಂದು ನಡೆದ ಜಾವೆಲಿನ್ ಅರ್ಹತಾ ಸುತ್ತಿನ ಪಂದ್ಯದಲ್ಲಿ 89.34 ಮೀ. ದೂರ ಜಾವೆಲಿನ್ ಎಸೆದು ನೀರಜ್ ಚೋಪ್ರಾ ಫೈನಲ್ ಪ್ರವೇಶಿಸಿದ್ದಾರೆ.
‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್ ಟಿಕೆಟ್ ಪಡೆದರು.
89.34 ಮೀ. ದೂರ ಜಾವೆಲಿನ್ ಎಸೆದದ್ದು ನೀರಜ್ ಅವರ 2ನೇ ಶ್ರೇಷ್ಠ ಸಾಧನೆಯಾಗಿದೆ.
ಭಾರತ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ 50 ಕೆಜಿ ವಿಭಾಗದಲ್ಲಿ ಇಂದು ನಡೆದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಪಾನ್ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.