ದೆಹಲಿ: ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ. ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕದೊಂದಿಗೆ ತಮ್ಮದೇ ಹಿಂದಿನ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಪಟಿಯಾಲದಲ್ಲಿ ನಡೆದ ಸ್ಪರ್ಧೆಯಲ್ಲಿ ನೀರಜ್ ಜಾವೆಲಿನ್‌ನನ್ನು 88.07 ಮೀಟರ್ ದೂರ ಎಸೆದಿದ್ದರು. ಇನ್ನು, ಆಗಸ್ಟ್ 7, 2021 ರಂದು ಟೋಕಿಯೊ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದು ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದರು. ಆದರೆ ಈ ಬಾರಿ ಅವರು ಮತ್ತೇ 89.30 ಮೀಟರ್ ಎಸೆಯುವ ಮೂಲಕ ತಮ್ಮ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ.
ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ 89.30 ಮೀಟರ್ ಥ್ರೋ ಮಾಡುವ ಮೂಲಕ ಎರಡನೇ ಸ್ಥಾನವನ್ನು ಗಳಿಸಿದರು. ಆಲಿವರ್ ಹೆಲ್ಯಾಂಡರ್ 89.93 ಮೀಟರ್ ದೂರ ಜಾವೆಲಿನ್ ಎಸೆದು ಮೊದಲ ಸ್ಥಾನ ಪಡೆದಿದ್ದಾರೆ ಮತ್ತು ಗ್ರೆನಡಾದ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್ 86.60 ಮೀಟರ್ ಎಸೆದು ಮೂರನೇ ಸ್ಥಾನ ಪಡೆದಿದ್ದಾರೆ.
89.30 ಮೀ ಜಾವೆಲಿನ್ ಎಸೆತದೊಂದಿಗೆ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ. ಇದು ಚೋಪ್ರಾ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ಮೊದಲ ಪಂದ್ಯ ಇದಾಗಿದೆ.