Home ಟಾಪ್ ಸುದ್ದಿಗಳು ಪುಣೆಯ ಆರ್ಮಿ ಕ್ರೀಡಾಂಗಣಕ್ಕೆ ನೀರಜ್ ಚೋಪ್ರಾ ಹೆಸರು ನಾಮಕರಣ

ಪುಣೆಯ ಆರ್ಮಿ ಕ್ರೀಡಾಂಗಣಕ್ಕೆ ನೀರಜ್ ಚೋಪ್ರಾ ಹೆಸರು ನಾಮಕರಣ

ಪುಣೆ: ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಭಾಗವಹಿಸಿದ ಹಾಗೂ ದೇಶದ ರಕ್ಷಣಾ ಪಡೆಗಳಲ್ಲಿ ಕಾರ್ಯನಿರ್ವಹಿಸುವ ಕ್ರೀಡಾಪಟುಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ ನಲ್ಲಿ ಸನ್ಮಾನಿಸಿದರು. ಇದೇವೇಳೆ ಪುಣೆಯ ಆರ್ಮಿ ಕ್ರೀಡಾ ಸಂಸ್ಥೆಯಲ್ಲಿರುವ ಕ್ರೀಡಾಂಗಣಕ್ಕೆ ಅಥ್ಲೀಟ್ ನೀರಜ್ ಚೋಪ್ರಾ ಹೆಸರನ್ನು ನಾಮಕರಣ ಮಾಡಲಾಯಿತು.

ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಟೋಕಿಯೊ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ನೀರಜ್ ಗೆ ಗೌರವ ಸೂಚಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version