ತಮಿಳುನಾಡಿನಲ್ಲಿ ನೀಟ್ ವಿವಾದ: ಬಿಜೆಪಿ ರಾಜ್ಯ ಕಚೇರಿಗೆ ಬಾಂಬ್ ಎಸೆತ

Prasthutha|

ಚೆನ್ನೈ: ತಮಿಳುನಾಡು ಬಿಜೆಪಿ ಪಕ್ಷದ ರಾಜ್ಯ ಕಚೇರಿಗೆ ಆಗಂತುಕರು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

- Advertisement -

ಮಧ್ಯರಾತ್ರಿ 1:30ಕ್ಕೆ ಬೈಕ್ ನಲ್ಲಿ ಬಂದಿದ್ದ ಅಪರಿಚಿತರು ಚೆನ್ನೈನ ಟಿ. ನಗರದ ವಿದ್ಯಾರಾಮನ್ ಬೀದಿಯಲ್ಲಿರುವ ಬಿಜೆಪಿ ಕಚೇರಿಯ ಮುಖ್ಯ ದ್ವಾರಕ್ಕೆ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ. ದೊಡ್ಡ ಮಟ್ಟದ ಹಾನಿಯೂ ಸಂಭವಿಸಿಲ್ಲ ಅಂತ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮಾಂಬಲಂ ಠಾಣಾ ಪೊಲೀಸರು ಪ್ರಕರಣದ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ಫೂಟೇಜ್ ಆಧಾರದಲ್ಲಿ ನಂದನಂ ಪ್ರದೇಶದ ವಿನೋದ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ಈತನ ಮೇಲೆ ಹಲವು ಅಪರಾಧ ಪ್ರಕರಣಗಳಿವೆ ಎಂದು ತಿಳಿದುಬಂದಿದೆ. ನೀಟ್ ಪರೀಕ್ಷೆಯ ವಿವಾದದ ವಿಚಾರದಲ್ಲಿ ತಮಿಳುನಾಡು ಬಿಜೆಪಿಯ ಬೆಂಬಲಕ್ಕಾಗಿ ಈ ಕೃತ್ಯ ಮಾಡಿರುವುದಾಗಿ ಬಂಧಿತ ವಿನೋದ್ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

Join Whatsapp