ನೀಟ್ ಪರೀಕ್ಷೆ ಅಕ್ರಮ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಖರ್ಗೆ ಆಗ್ರಹ

Prasthutha|

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆ, ರಿಗ್ಗಿಂಗ್ ಮತ್ತು ಭ್ರಷ್ಟಾಚಾರ ಅವಿಭಾಜ್ಯ ಅಂಗವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -

ನೀಟ್ ಮತ್ತು ಇತರ ಪರೀಕ್ಷೆಗಳಿಗೆ ಹಾಜರಾಗುವ ನಮ್ಮ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತೆ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.

ಇದಕ್ಕೆ ಮೋದಿ ಸರ್ಕಾರವೇ ನೇರ ಹೊಣೆ. ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ನಂತರ ಹಲವಾರು ಅಕ್ರಮಗಳನ್ನು ಎದುರಿಸಿ, ಪೇಪರ್ ಸೋರಿಕೆಯ ಚಕ್ರವ್ಯೂಹಕ್ಕೆ ಸಿಲುಕಿ ಅವರ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಬಿಜೆಪಿ ದೇಶದ ಯುವಕರಿಗೆ ಮೋಸ ಮಾಡಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.



Join Whatsapp