Home ಟಾಪ್ ಸುದ್ದಿಗಳು NEET ಪರೀಕ್ಷೆ ಶೀಘ್ರ ರದ್ದು: ಸಿಎಂ ಸ್ಟಾಲಿನ್

NEET ಪರೀಕ್ಷೆ ಶೀಘ್ರ ರದ್ದು: ಸಿಎಂ ಸ್ಟಾಲಿನ್

ಚೆನ್ನೈ: ನೀಟ್‌ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ ಎಂದು ತಮಿಳು ನಾಡು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.


ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.


ಈ ಕುರಿತು ಮಾತನಾಡಿದ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್, ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version