ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅಭಿನಂದನೆ

Prasthutha|

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Xನಲ್ಲಿ ಪೋಸ್ಟ್ ಮಾಡಿದ ಸಿಎಂ,ಸಿಎಂ ‘3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ.ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

Join Whatsapp