ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ; ಈ ವರ್ಷದ 24ನೇ ಪ್ರಕರಣ

Prasthutha|

ಕೋಟ: ರಾಜಸ್ಥಾನದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಕೋಟದಲ್ಲಿ ಮಂಗಳವಾರ ರಾತ್ರಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಈ ವರ್ಷ ಕೇವಲ ಎಂಟು ತಿಂಗಳ ಅವಧಿಯಲ್ಲಿ ರಾಜಸ್ಥಾನದ ಕೋಚಿಂಗ್ ಹಬ್ ಆಗಿರುವ ಕೋಟಾದಲ್ಲಿ 24 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಆತ್ಮಹತ್ಯೆಗೂ ಮೊದಲು ಕೊಠಡಿ ಬಾಗಿಲು ಹಾಕಿಕೊಂಡಿದ್ದರಿಂದ ಮತ್ತೊಬ್ಬ ವಿದ್ಯಾರ್ಥಿನಿ ಅನುಮಾನಗೊಂಡು ಹಾಸ್ಟೆಲ್ ವಾರ್ಡನ್ಗೆ ಮಾಹಿತಿ ನೀಡಿದರು. ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಯಿತು.

- Advertisement -


ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಕೋಟಾ ನಗರದ ಬ್ಲೇಜ್ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದಳು. ಆಕೆ ನೇಣು ಬಿಗಿದುಕೊಂಡಿದ್ದು, ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ.

Join Whatsapp