Home ಟಾಪ್ ಸುದ್ದಿಗಳು ನೀಟ್-ಯುಜಿ 2024: ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ನೋಟಿಸ್

ನೀಟ್-ಯುಜಿ 2024: ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ನೋಟಿಸ್

ನವದೆಹಲಿ: ಎನ್‌ಇಇಟಿ-ಯುಜಿ 2024ರ ಪರೀಕ್ಷೆಯನ್ನು ರದ್ದು ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ಅಕ್ರಮದ ಮೂಲಕ ಉತ್ತೀರ್ಣನಾದ ವಿದ್ಯಾರ್ಥಿ ವೈದ್ಯನಾದರೆ, ಅವನು ಸಮಾಜಕ್ಕೆ ಎಷ್ಟು ಹಾನಿಮಾಡಬಹುದು ಎಂಬುದನ್ನು ಕಲ್ಪಿಸಿಕೊಳ್ಳಿ. ಅಂತಹ ಪರೀಕ್ಷೆಗಳ ತಯಾರಿಗಾಗಿ ವಿದ್ಯಾರ್ಥಿಗಳು ಎಷ್ಟು ಶ್ರಮಪಡುತ್ತಾರೆ ಎಂಬುದು ನಮಗೆ ತಿಳಿದಿದೆ. ನಾವು ಈ ಸಂಬಂಧ ಸಮಯೋಚಿತ ಕ್ರಮಗಳನ್ನು ಬಯಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಅಂತಹ ಪರೀಕ್ಷೆಗಳ ತಯಾರಿಗಾಗಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟಿರುತ್ತಾರೆ. ಪ್ರಕರಣ ಕುರಿತಂತೆ ಕೂಲಂಕಷ ತನಿಖೆ ನಡೆಸಬೇಕು ಎಂದ ನ್ಯಾಯಮೂರ್ತಿಗಳ ವಿಕ್ರಮ್ ನಾಥ್, ಎಸ್‌.ವಿ.ಎನ್ ಭಟ್ಟಿ ಅವರನ್ನು ಒಳಗೊಂಡ ನ್ಯಾಯಪೀಠ, ಕೇಂದ್ರ ಮತ್ತು ಎನ್‌ಟಿಎಗೆ ನೋಡಿಸ್ ಜಾರಿಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಜುಲೈ 8ಕ್ಕೆ ನಿಗದಿ ಮಾಡಿದೆ. ಪರೀಕ್ಷೆ ರದ್ದು ಮತ್ತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿರುವ ಇತರ ಅರ್ಜಿಗಳೂ ಅಂದೇ ವಿಚಾರಣೆಗೆ ಬರಲಿವೆ.

Join Whatsapp
Exit mobile version