ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ನ ಪ್ರಾಂಶುಪಾಲ, ಉಪ ಪ್ರಾಂಶುಪಾಲರನ್ನು ಬಂಧಿಸಿದ ಸಿಬಿಐ

Prasthutha|

ಜಾರ್ಖಂಡ್: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿರುವ ಶಾಲೆಯ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಎಹ್ಸಾನುಲ್ ಹಕ್ ಮತ್ತು ಇಮ್ತಿಯಾಝ್ ಆಲಂ ಬಂಧಿತರು.

ಮೇ 5 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಒಯಾಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಅವರನ್ನು ಹಜಾರಿಬಾಗ್ ನಗರ ಸಂಯೋಜಕರನ್ನಾಗಿ ಮಾಡಲಾಗಿತ್ತು. ಉಪ ಪ್ರಾಂಶುಪಾಲ ಇಮ್ತಿಯಾಝ್ ಆಲಂ ಅವರನ್ನು ಎನ್ಟಿಎ ವೀಕ್ಷಕ ಮತ್ತು ಒಯಾಸಿಸ್ ಶಾಲೆಯಲ್ಲಿ ಕೇಂದ್ರದ ಸಂಯೋಜಕರಾಗಿ ನೇಮಿಸಲಾಗಿತ್ತು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಜಿಲ್ಲೆಯ ಇನ್ನೂ ಐದು ಜನರನ್ನು ಪ್ರಶ್ನಿಸುತ್ತಿದೆ.

ವಿವರವಾದ ವಿಚಾರಣೆಯ ನಂತರ ಫೆಡರಲ್ ತನಿಖಾ ಸಂಸ್ಥೆ ಹಕ್ ಮತ್ತು ಆಲಂ ಅವರನ್ನು ಬಂಧಿಸಿದೆ ಎಂದು ಅವರು ಹೇಳಿದರು.

ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕ (ಇಒಯು) ತನಿಖೆಯ ಸಮಯದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.



Join Whatsapp