ನವದೆಹಲಿ: ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಬಂಧನವನ್ನು ಮಾಡಿದೆ. ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಪರೀಕ್ಷೆಗೂ ಮುನ್ನ ಸೋರಿಕೆಯಾದ ಪ್ರಶ್ನೆಪತ್ರಿಕೆ ನೀಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ವ್ಯವಸ್ಥೆ ಮಾಡಿಕೊಟ್ಟ ಆರೋಪದ ಮೇಲೆ ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಧಿಸಿದಂತೆ ಸಿಬಿಐ ಈವರೆಗೆ 6 ಎಫ್ ಐಆರ್ ದಾಖಲಿಸಿದೆ.