ತುಮಕೂರು: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ ತಾಯಿ ಮೇಲೂ ಹಲ್ಲೆ ಮಾಡಲಾಗಿದೆ. ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೋಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.