Home ಟಾಪ್ ಸುದ್ದಿಗಳು ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಝ್ 6 ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಝ್ 6 ದಿನ ಸಿಐಡಿ ವಶಕ್ಕೆ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಝ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.


ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್ಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Join Whatsapp
Exit mobile version