ನನ್ನ ಮಗನಿಗೆ ನೇಹಾ ಪ್ರಪೋಸ್ ಮಾಡಿದ್ದಳು: ಆರೋಪಿ ಫಯಾಝ್ ತಾಯಿ

Prasthutha|

ಧಾರವಾಡ: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ ಎಂದು ಫಯಾಝ್ ತಾಯಿ ಮುಮ್ತಾಝ್ ಹೇಳಿದ್ದಾರೆ.

- Advertisement -


ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಾಯಿ ಮುಮ್ತಾಝ್, ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ. ನನ್ನ ಮಗ ಫಯಾಜ್ ಗೆ ನೇಹಾ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ಲವ್ ಬೇಡ ಅಂತ ಹೇಳಿದ್ದೆ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕು ಎಂದಿದ್ದಾರೆ.


ಮಗ ಕೆಎಎಸ್ ಅಧಿಕಾರಿ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಈ ರೀತಿ ಆಗಿದ್ದಕ್ಕೆ ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ. ಫಯಾಜ್-ನೇಹಾ ಮದುವೆ ಆಗಬೇಕು ಅಂತ ಇದ್ದರು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

Join Whatsapp