‘ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳಿಗೆ ಮಾರಕ’: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ

Prasthutha|

ಮೈಸೂರು: ರಾಜ್ಯ ಸರ್ಕಾರವು ಯಾವುದೇ ಚರ್ಚೆ ನಡೆಸದೆ ಆತುರಾತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದು, NEP ಯೋಜನೆ ಕೇಸರೀಕರಣಗೊಂಡಿದೆ. ಇದು ವಿದ್ಯಾರ್ಥಿಗಳಿಗೆ ಮಾರಕವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಯಾವುದೇ ಚರ್ಚೆ ನಡೆಸದೆ ಆತುರಾತುರವಾಗಿ ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯು ವಿದ್ಯಾರ್ಥಿಗಳಿಗೆ ಮಾರಕವಾಗಲಿದೆ. ಅದರಲ್ಲೂ ಕರ್ನಾಟಕದಲ್ಲೇ ಮೊದಲು ಜಾರಿಗೊಳಿಸಲು ಮುಂದಾಗಿದ್ದಾರೆ. ಮೊದಲು ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಪುರಾಣ ಕಲ್ಪನೆ ಆಧಾರದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

- Advertisement -

ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿಯ ಹಲವರು ಆರೆಸ್ಸೆಸ್ ಕಾರ್ಯಕರ್ತರು ಮತ್ತು ಭ್ರಷ್ಟಾಚಾರದ ಆರೋಪ ಹೊತ್ತವರೂ ಇದ್ದಾರೆ. ಭಾರತದ ವಿವಿಧತೆಗೆ ಧ್ವನಿಯಾಗಬಲ್ಲ ಸದಸ್ಯರ ನೇಮಕವಾಗಿಲ್ಲ. ನೂತನ ಶಿಕ್ಷಣ ನೀತಿಯಲ್ಲಿ ಬಹುತ್ವದ ಚಿಂತನೆಗಳಿಲ್ಲ. SSLC ಪರೀಕ್ಷೆ ಕೈಬಿಡಲಾಗಿದೆ. ಬದಲಿಗೆ 12ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಇದು ವಿದ್ಯಾರ್ಥಿಗಳಿಗೆ ಮಾರಕವಾಗಲಿದೆ ಎಂದರು.

- Advertisement -