ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿದ್ದರಾಮಯ್ಯ

Prasthutha|

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್, ‘ಆರ್ ಎಸ್ ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್ ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು’ ಎಂದು ಆಗ್ರಹಿಸಿದರು.


ಅದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಈ ವರ್ಷ ತಡ ಆಯಿತು. ಮುಂದಿನ ವರ್ಷದಿಂದ ಎನ್ಇಪಿಯನ್ನು ಪೂರ್ಣವಾಗಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ’ ಎಂದರು.

Join Whatsapp