NEPಯಿಂದ ಕನ್ನಡ ಭಾಷೆಗೆ ಧಕ್ಕೆ: ಸಚಿವ ಮಧು ಬಂಗಾರಪ್ಪ

Prasthutha|

ಮಂಡ್ಯ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) ಜಾರಿಯ ಹಿಂದೆ ಹಿಂದಿ ಭಾಷೆ ಹೇರುವ ಉದ್ದೇಶವಿದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -


ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಪ್ರತಿ ರಾಜ್ಯದಲ್ಲೂ ತನ್ನದೇ ಸಂಸ್ಕೃತಿ, ಭಾಷೆ, ಶಿಕ್ಷಣ ವ್ಯವಸ್ಥೆ ಇರುತ್ತದೆ. ಕೇಂದ್ರ ಸರ್ಕಾರ ಒಂದು ರಾಜ್ಯದ ಸಂಸ್ಕೃತಿಯನ್ನು ಇನ್ನೊಂದು ರಾಜ್ಯದ ಮೇಲೆ ಹೇರುವ ಕೆಟ್ಟ ಕೆಲಸ ಮಾಡುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು ಎಲ್ಲಾ ರಾಜ್ಯಗಳ ಸಂಸ್ಕೃತಿ, ಭಾಷೆ ಹಾಗೂ ಶಿಕ್ಷಣಕ್ಕೆ ಗೌರವ ನೀಡಬೇಕು ಎಂದರು.


ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಎನ್ ಇಪಿಯನ್ನು ವಿರೋಧಿಸಿದ್ದೆವು, ಪಠ್ಯ ಪರಿಷ್ಕರಣೆ ಮಾಡುವುದಾಗಿ ತಿಳಿಸಿದ್ದೆವು. ಈ ಕಾರಣಕ್ಕಾಗಿ ನಾವಿಂದು ಅಧಿಕಾರದಲ್ಲಿ ಕುಳಿತಿದ್ದೇವೆ. ಮಕ್ಕಳ ಶಿಕ್ಷಣ ರಾಜಕೀಯ ಪಕ್ಷಗಳ ಸಿದ್ಧಾಂತದ ಮೇಲೆ ನಡೆಯಬಾರದು. ನಮ್ಮ ಸರ್ಕಾರ ಶಿಕ್ಷಣದಲ್ಲಿ ಉತ್ತಮ ವಾತಾವರಣ ರೂಪಿಸಲು ಬದ್ಧವಾಗಿದೆ ಎಂದರು.

Join Whatsapp