Home ಟಾಪ್ ಸುದ್ದಿಗಳು ನೇಪಾಳ ಭೂಕಂಪ: ಸಾವಿನ ಸಂಖ್ಯೆ 128ಕ್ಕೆ ಏರಿಕೆ

ನೇಪಾಳ ಭೂಕಂಪ: ಸಾವಿನ ಸಂಖ್ಯೆ 128ಕ್ಕೆ ಏರಿಕೆ

ಕಠ್ಮಂಡು: ನೇಪಾಳದ ಕಠ್ಮಂಡು ಸೇರಿದಂತೆ ಹಲವು ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಸಾವಿಗೀಡಾದವರ ಸಂಖ್ಯೆ 128 ಕ್ಕೆ ಏರಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅನೇಕ ಕಟ್ಟಡಗಳು ನೆಲಸಮಗೊಂಡಿವೆ. ಹಲವರು ತೀವ್ರಗಾಯಗೊಂಡಿದ್ದಾರೆ.

ರುಕುಮ್ ವೆಸ್ಟ್‌ನಲ್ಲಿ ಕನಿಷ್ಠ 36 ಜನರು ಮತ್ತು ಜಾಜರ್ಕೋಟ್ ನಲ್ಲಿ 34 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಜನ ಅತ್ತಿತ್ತ ನೋಡಿ ತನ್ನವರನ್ನು ಹುಡುಕುತ್ತಿರುವ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವೆರೆದಿದೆ ಎಂದು ವರದಿ ತಿಳಿಸಿದೆ.

ಪ್ರಧಾನಿ ಮೋದಿ ದುರಂತಕ್ಕೆ ಸಂತಾಪ ಸೂಚಿಸಿದ್ದು, ನೇಪಾಳದ ಜನರೊಂದಿಗೆ ಭಾರತವು ಒಗ್ಗಟ್ಟಿನಲ್ಲಿ ನಿಂತಿದೆ ಎಂದು ಹೇಳಿದ್ದಾರೆ. ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧವಾಗಿದೆ. ನಮ್ಮ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗಿದೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ ಎಂದು ಅವರು X ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2015 ರಲ್ಲಿ 7.8 ತೀವ್ರತೆಯ ಭೂಕಂಪದಿಂದ 12,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು

Join Whatsapp
Exit mobile version