ಬೆಂಗಳೂರು: ನಾನಾಗಲೀ ಸತೀಶ್ ಜಾರಕಿಜೊಳಿ ಆಗಲೀ, ಮಹಾದೇಪ್ಪ ಆಗಲೀ ನಾವು ಸಿಎಂ ಪದವಿ ಬಗ್ಗೆ ಚರ್ಚೆ ಯಾವತ್ತೂ ಮಾಡಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರ್ತಾರೆ ಅಂತ ನಾವು ಅನೇಕ ಬಾರಿ ಹೇಳಿದ್ದೀವಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪ್ರತ್ಯೇಕ ಸಭೆಗಳಿಗೆ ಹೈಕಮಾಂಡ್ ಬ್ರೇಕ್ ಹಾಕಲು ತಾಕೀತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಲೀ ಸತೀಶ್ ಜಾರಕಿಜೊಳಿ ಆಗಲೀ, ಮಹಾದೇಪ್ಪ ಆಗಲೀ ನಾವು ಸಿಎಂ ಪದವಿ ಬಗ್ಗೆ ಚರ್ಚೆ ಯಾವತ್ತೂ ಮಾಡಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರ್ತಾರೆ ಅಂತ ನಾವು ಅನೇಕ ಬಾರಿ ಹೇಳಿದ್ದೀವಿ. ಇದು ಬಿಟ್ಟು ನಾವ್ಯಾರೂ ಕೂಡಾ ಸಿಎಂ ಅವರನ್ನ ಬದಲಾಯಿಸಿ, ಬೇರೆಯವರನ್ನು ಮಾಡಿ, ನಮಗೆ ಮಾಡಿ ಅಂತ ಮಾತಾಡಿಲ್ಲ. ಇನ್ಮುಂದೆ ನಾನು ಸಿಎಂ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ನಾವು ಅನವಶ್ಯಕವಾಗಿ ಡಿನ್ನರ್ ಮೀಟಿಂಗ್, ರಾಜಕೀಯ ಮೀಟಿಂಗ್ಸ್ ಮಾಡಿಲ್ಲ, ಮಾಡುವುದೂ ಇಲ್ಲ. ಮುಂದೆಯೂ ಅನವಶ್ಯಕ ಭೇಟಿಗಳನ್ನು ಮಾಡಲ್ಲ. ಇದು ನನ್ನ ಸ್ಪಷ್ಟ ಹೇಳಿಕೆ. ಏನೂ ಇಲ್ಲದೇ ನಮ್ಮನ್ನು ಆಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ಬೇಜಾರಾಗಲ್ವಾ? ನಾವೆಲ್ಲ ಜವಾಬ್ದಾರಿ ಇರೋರು, ಹುಡುಗಾಟಿಕೆ ಮಾಡೋರಲ್ಲ, ನಾವು ಪಕ್ಷದಲ್ಲಿ ಹಿರಿಯರು, ನಮಗೂ ಜವಾಬ್ದಾರಿ ಇದೆ ಎಂದು ಗರಂ ಆಗಿದ್ದಾರೆ