ಬೆಂಗಳೂರು: ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇಂದು ಬರೋಬ್ಬರಿ 165 ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದರೂ ಇಂದು ಬೆಂಗಳೂರಿನಲ್ಲಿ 165 ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.