ಬೆಂಗಳೂರು: ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ ಮಾಡಲಾಗಿದ್ದು, ಇದಕ್ಕೆ ರಾಜ್ಯ ವೃತ್ತಿ ಶಿಕ್ಷಣ ಪರಿಷತ್ ಅನುಮೋದನೆ ನೀಡಿದೆ.
ಪ್ರಸಕ್ತ ಸಾಲಿನಿಂದ ಹೊಸ ಕೋರ್ಸ್ ಗೆ ಸೇರಲು ಅವಕಾಶ ನೀಡಲಾಗುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲಾ 150 ಐ.ಟಿ.ಐ.ಗಳಿಗೆ ಅನ್ವಯವಾಗಲಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವರು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (2 ವರ್ಷ), ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ (2 ವರ್ಷ), ಅಡ್ವಾನ್ಸ್ಡ್ ಮ್ಯಾನೊಫ್ಯಾಕ್ಚರಿಂಗ್ (1 ವರ್ಷ), ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ), ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನೊಫ್ಯಾಕ್ಚರ್ (1 ವರ್ಷ), ಮ್ಯಾನೊಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ (1 ವರ್ಷ), ಈ 6 ಸಂಯೋಜನೆಗಳು ಐ.ಟಿ.ಐ.ಗೆ ಸೇರ್ಪಡೆಯಾಗುತ್ತವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ 3 ತಿಂಗಳ ಅವಧಿಯ 23 ಅಲ್ಪಾವಧಿ ಸರ್ಟಿಫೈಯ್ಡ್ ಕೋರ್ಸ್ ಗಳಿಗೆ ಕೂಡ ಎಸ್.ವಿ.ಸಿ.ಟಿ.ಯು ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.