► ಆಸ್ಪತ್ರೆ, ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯಕ್ಕೂ ಯೋಜನೆ
ಸುಪ್ರೀಮ್ ಕೋರ್ಟ್ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ಹೊಸ ಮಸೀದಿಯು ಧ್ವಂಸಗೊಂಡ ಬಾಬ್ರಿ ಮಸೀದಿಯ ಗಾತ್ರವನ್ನೇ ಹೊಂದಿರಲಿದೆ ಎಂದು ಮಸೀದಿ ನಿರ್ಮಾಣಕ್ಕೆ ರಚಿಸಲಾಗಿರುವ ಟ್ರಸ್ಟ್ ನ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ಈ ಬೃಹತ್ ಮಸೀದಿಯು ಆಸ್ಪತ್ರೆ, ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯವನ್ನೂ ಹೊಂದಲಿದೆ.
1992ರಲ್ಲಿ ಸಂಘಪರಿವಾರ ಧ್ವಂಸಗೊಳಿಸಿದ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಅದೇ ರೀತಿ ಮುಸ್ಲಿಮರಿಗೆ ಅಯೋಧ್ಯೆಯಲ್ಲಿಯೇ 5 ಎಕರೆ ಪ್ರತ್ಯೇಕ ಸ್ಥಳ ನೀಡಬೇಕೆಂದು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಅಯೋಧ್ಯೆಯ ಧನ್ನೀಪುರದಲ್ಲಿ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ನ ಅಧೀನದಲ್ಲಿ 15,000 ಚದರ ವಿಸ್ತ್ರೀರ್ಣದಲ್ಲಿ ತಲೆ ಎತ್ತಲಿರುವ ಈ ಮಸೀದಿಯ ಉಳಿದ ಜಾಗದಲ್ಲಿ ಆಸ್ಪತ್ರೆ, ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯವನ್ನು ಒಳಗೊಳ್ಳಲಿದೆ ಎಂದು ಕಾರ್ಯದರ್ಶಿ ಹಾಗೂ ಟ್ರಸ್ಟ್ ನ ವಕ್ತಾರನಾಗಿರುವ ಅಥರ್ ಹುಸೈನ್ ಮಾಹಿತಿ ನೀಡಿದ್ದಾರೆ