ಅಯೋಧ್ಯೆ । ಬಾಬರಿಯ ಆಕಾರವನ್ನೇ ಹೊಂದಿರಲಿದೆ ಹೊಸ ಮಸೀದಿ

Prasthutha: September 5, 2020

ಆಸ್ಪತ್ರೆ, ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯಕ್ಕೂ ಯೋಜನೆ

ಸುಪ್ರೀಮ್ ಕೋರ್ಟ್ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ಹೊಸ ಮಸೀದಿಯು ಧ್ವಂಸಗೊಂಡ ಬಾಬ್ರಿ ಮಸೀದಿಯ ಗಾತ್ರವನ್ನೇ ಹೊಂದಿರಲಿದೆ ಎಂದು ಮಸೀದಿ ನಿರ್ಮಾಣಕ್ಕೆ ರಚಿಸಲಾಗಿರುವ ಟ್ರಸ್ಟ್ ನ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.  ಈ ಬೃಹತ್ ಮಸೀದಿಯು ಆಸ್ಪತ್ರೆ, ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯವನ್ನೂ ಹೊಂದಲಿದೆ.

1992ರಲ್ಲಿ ಸಂಘಪರಿವಾರ ಧ್ವಂಸಗೊಳಿಸಿದ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಅದೇ ರೀತಿ ಮುಸ್ಲಿಮರಿಗೆ ಅಯೋಧ್ಯೆಯಲ್ಲಿಯೇ  5 ಎಕರೆ ಪ್ರತ್ಯೇಕ ಸ್ಥಳ ನೀಡಬೇಕೆಂದು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಅಯೋಧ್ಯೆಯ ಧನ್ನೀಪುರದಲ್ಲಿ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ನ ಅಧೀನದಲ್ಲಿ  15,000 ಚದರ ವಿಸ್ತ್ರೀರ್ಣದಲ್ಲಿ ತಲೆ ಎತ್ತಲಿರುವ ಈ ಮಸೀದಿಯ ಉಳಿದ ಜಾಗದಲ್ಲಿ ಆಸ್ಪತ್ರೆ, ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯವನ್ನು ಒಳಗೊಳ್ಳಲಿದೆ ಎಂದು ಕಾರ್ಯದರ್ಶಿ ಹಾಗೂ ಟ್ರಸ್ಟ್ ನ ವಕ್ತಾರನಾಗಿರುವ ಅಥರ್ ಹುಸೈನ್ ಮಾಹಿತಿ ನೀಡಿದ್ದಾರೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!