October 14, 2021

ಹಿಂದೂ ಹುಲಿ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ! ಭಾರೀ ಸದ್ದು ಮಾಡಿದ ಜಾಲತಾಣ ಪೋಸ್ಟ್

► ಅಶ್ಲೀಲ ಫೋಟೋ ವಿರುದ್ಧ ಪೊಲೀಸ್ ದೂರು ನೀಡಿದ ಯತ್ನಾಳ್ ಆಪ್ತ

ವಿಜಯಪುರ: ರಾಜ್ಯದಲ್ಲಿ ಸದಾ ಸುದ್ದಿಯಲ್ಲಿರುವ ಸಿಡಿ ಬಾಂಬ್ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ರಮೆಶ್ ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಬಹಿರಂಗ ಗೊಂಡಿದ್ದ ಬೆನ್ನಲ್ಲೇ, ಬಿಜೆಪಿ ನಾಯಕ ಡಿವಿ ಸದಾನಂದ ಗೌಡರದ್ದು ಎನ್ನಲಾದ ಅಶ್ಲೀಲ ವೀಡಿಯೋ ವ್ಯಾಪಕವಾಗಿ ಹರಿದಾಡಿತ್ತು. ಆದರೆ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಡಿ ಬಿಡುಗಡೆಗೆ ಕ್ಷಣಗಣನೆ ಎನ್ನುವ ಪೋಸ್ಟ್ ಜಾಲತಾಣದಾದ್ಯಂತ ಭಾರೀ ಸದ್ದು ಮಾಡಿದೆ. ‘ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ’ ಎಂಬ ಬರಹದಡಿ ಯತ್ನಾಳ್ ಅವರನ್ನು ಹೋಲುವ ಅಶ್ಲೀಲ ಫೋಟೋ ಹರಿದಾಡುತ್ತಿದೆ.

ಈ ಬಗ್ಗೆ ನಮ್ಮ ಕಾಂಗ್ರೆಸ್ ಇನಸ್ಟಾಗ್ರಾಮ್‌ನಲ್ಲಿ ಪೇಜ್ ನಲ್ಲಿಯೂ ಈ ಫೋಸ್ಟ್ ಹಾಕಲಾಗಿದ್ದು, ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ಅಲ್ಲದೇ ಜೆಡಿಎಸ್‌ ಮಿಷನ್ 2023 ಎಂಬ ಫೇಸ್ಬುಕ್ ಅಕೌಂಟ್ನಲ್ಲಿಯೂ ಫೋಟೊ ಹರಿದಾಡುತ್ತಿದೆ. ಬಿಜೆಪಿ ನಾಯಕನ ಸಿಡಿ‌ ಬಿಡುಗಡೆಗೆ ಕ್ಷಣಗಣನೆ ಎಂಬ‌ ಟ್ಯಾಗ್ಲೈನ್ ಹಾಕಲಾಗಿದೆ.

ಈ ಸಂಬಂಧ ಯತ್ನಾಳ್ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ವಿಜಯಪುರದ ಸೈಬರ್ ( ಸಿಇಎನ್) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಾಸಕರಿಗೆ ಅವಮಾನ ಮಾಡಲಾಗಿದ್ದು ಶಾಸಕರದ್ದು ಎನ್ನಲಾದ ಭಾವಚಿತ್ರ ಮತ್ತು ಅಶ್ಲೀಲ ಬರಹ ಹರಿದಾಡುತ್ತಿದೆ ಈ ಬಗ್ಗೆ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!