ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

Prasthutha|

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.

- Advertisement -

ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಗುರುವಾರ ಸೇವಾ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಅವರ ಜಾಗಕ್ಕೆ 1984ರ ತಂಡದ ಐಎಎಸ್ ಅಧಿಕಾರಿ ರವಿ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ 38ನೇ ಮುಖ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್ ನೇಮಕಗೊಂಡಿದ್ದಾರೆ.

Join Whatsapp