Home ಟಾಪ್ ಸುದ್ದಿಗಳು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಗುರುವಾರ ಸೇವಾ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಅವರ ಜಾಗಕ್ಕೆ 1984ರ ತಂಡದ ಐಎಎಸ್ ಅಧಿಕಾರಿ ರವಿ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ 38ನೇ ಮುಖ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್ ನೇಮಕಗೊಂಡಿದ್ದಾರೆ.

Join Whatsapp
Exit mobile version