ಬಂಟ್ವಾಳ ಕೆಳಗಿನ ಪೇಟೆಯಲ್ಲಿ ನೂತನ ಆರೋಗ್ಯ ಕೇಂದ್ರ ಉದ್ಘಾಟನೆ

Prasthutha|

ಬಂಟ್ವಾಳ: ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಅಧೀನದಲ್ಲಿ ಬಂಟ್ವಾಳ ಕೆಳಗಿನ ಪೇಟೆಯ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಇದರ ನೆಲ ಮಹಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಉಪ ಕೇಂದ್ರ ಸಾರ್ವಜನಿಕ ಅನುಕೂಲಕ್ಕಾಗಿ ಸ್ಥಳೀಯ ಪುರಸಭಾ ಸದಸ್ಯರಾದ ಮೂನಿಷ್ ಆಲಿಯವರ ನೇತ್ರತ್ವದಲ್ಲಿ ಶುಭ ಹಾರೈಕೆಯೊಂದಿಗೆ ತೆರೆಯಿತು.

- Advertisement -

ಈ ಕಾರ್ಯಕ್ರಮವನ್ನು ಸಮದ್ ಹುದೈವಿಯವರು ಉದ್ಘಾಟಿಸಿ, ಸ್ಥಳೀಯ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಇದರ ಕಾರ್ಯದರ್ಶಿ ಬಿ. ಮೊಹಮ್ಮದ್ ಹಾಗೂ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ಸಲೀಂ ಶುಭ ಹಾರೈಸಿದರು. ಬಂಟ್ವಾಳ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಶಾಫಿ, ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಹಾಜಿ ರಹಿಮಾನ್, ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಅಧ್ಯಕ್ಷರಾದ ಇಫಾಝ್, ಶಾಲಾ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾಸ್ಟರ್, ಅಂಗನವಾಡಿ ಶಿಕ್ಷಕಿ ಪೌಲಿನ್, ಆರೋಗ್ಯ ಕೇಂದ್ರದ ಸಂಧಿಕ, ಆಶಾ ಕಾರ್ಯಕರ್ತೆ ಶೋಭಾ, ಸ್ಥಳೀಯರಾದ ಉಬೈದುಲ್ಲಾ, ಇಸ್ಮಾಯಿಲ್, ಅಸ್ಲಾಂ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆರೋಗ್ಯ ಕೇಂದ್ರದ ಶ್ವೇತ ಸ್ವಾಗತಿಸಿ ಉಪ ಕೇಂದ್ರದ ಮಾಹಿತಿಯನ್ನು ನೀಡಿ ವಂದಿಸಿದರು.

Join Whatsapp