Home ಕರಾವಳಿ ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ಮಂಗಳೂರು : ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ 32 ಬೆಡ್ ಗಳ ಮೆಡಿಸಿನ್ ವಿಭಾಗದ ತೀವ್ರ ನಿಗಾ ಘಟಕ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಎಸ್ ಡಿಆರ್ ಎಫ್ ಅನುದಾನದಲ್ಲಿ ನಿರ್ಮಾಣಗೊಂಡಿರುವ ಐಸಿಯು ಘಟಕವು ವೆಂಟಿಲೇಟರ್, ಮೊನಿಟರ್ ಸೇರಿ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಹೊಂದಿವೆ. ಮಕ್ಕಳು ಸೇರಿದಂತೆ ವಯಸ್ಕರ ಚಿಕಿತ್ಸೆಯ ಬಳಕೆಗೆ ಐಸಿಯು ಘಟಕ ನೆರವಾಗಲಿದೆ.

ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

Join Whatsapp
Exit mobile version