ಶೀಘ್ರದಲ್ಲೇ ಕೆಪಿಸಿಸಿಗೆ ನೂತನ ಅಧ್ಯಕ್ಷ..!

Prasthutha|

ರಾಯಚೂರು: ಕೆಪಿಸಿಸಿಯ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಅ.16 ರಂದು ನಡೆಯಲಿದೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಯಮಾವಳಿಗಳ ಮಾನದಂಡದಂತೆ ಸದಸ್ಯರು ಸ್ಪರ್ಧೆ ಮಾಡಬಹುದಾಗಿದೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದರು.
ನೀವು ಮತ್ತೊಮ್ಮೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನನ್ನ ಎರಡು ವರ್ಷ ಅವಧಿ ಮುಗಿಯುತ್ತಿದೆ. ಮತ್ತೆ ಸ್ಪರ್ಧೆ ಮಾಡಬೇಕೋ ಬೇಡವೋ ಎಂಬುದನ್ನು ನಾಯಕರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.



Join Whatsapp