ತುಮಕೂರು ನೂತನ ಸಂಸದ ವಿ. ಸೋಮಣ್ಣಗೆ ಸಿಗಲಿದೆ ಸಚಿವ ಸ್ಥಾನ

Prasthutha|

ನವದೆಹಲಿ: ಕರ್ನಾಟಕದ ಐವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ಸಂಸದ ವಿ ಸೋಮಣ್ಣ ತಿಳಿಸಿದ್ದಾರೆ.

- Advertisement -

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ. ಜವಾಬ್ದಾರಿ ಹಾಗೂ ಕರ್ತವ್ಯ ನಿರ್ವಹಿಸುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಎಲ್ಲರೂ ಹೇಗೆ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಎಲ್ಲಕ್ಕಿಂತ ದೇಶ ದೊಡ್ಡದು. ಚೆನ್ನಾಗಿ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಪಕ್ಷ ಅವಕಾಶ ನೀಡಿದೆ. ಪಕ್ಷ ಹೇಳಿದಂತೆ ನಡೆದುಕೊಂಡಿದ್ದೇನೆ. ಪಕ್ಷದ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

ತುಮಕೂರು ನೂತನ ಸಂಸದ ವಿ. ಸೋಮಣ್ಣ ಅವರ ಅದೃಷ್ಟ ಖುಲಾಯಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ನಾಲ್ಕೈದು ಬಾರಿ ಸಂಸದರಾಗಿರುವ ಗದ್ದಿಗೌಡರ್, ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರ ನಡುವೆ ಸೋಮಣ್ಣ ಅವರಿಗೆ ಮಂತ್ರಿ ಖಾತೆ ಒಲಿದು ಬಂದಂತಾಗಿದೆ.

Join Whatsapp