ಬೆಂಗಳೂರು: ವಾಹನಗಳಿಗೆ ನವೀಕೃತ ನಂಬರ್ ಪ್ಲೇಟ್ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಪುನಃ 2 ಅಥವಾ 3 ತಿಂಗಳು ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ತೀರ್ವನಿಸಿದೆ. ನವೆಂಬರ್ ಮೊದಲ ವಾರದಲ್ಲಿ ಹೊಸ ಆದೇಶ ಹೊರಬೀಳಲಿದೆ.
ಕರ್ನಾಟಕ ಸಾರಿಗೆ ಇಲಾಖೆಯೂ ಏಪ್ರಿಲ್ 1, 2019ಕ್ಕೂ ಮುನ್ನ ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್‌ಗಳನ್ನು ಕಡ್ಡಾಯಗೊಳಿಸಿದೆ. ಅದಲ್ಲದೇ ನವೆಂಬರ್ 17 ಡೆಡ್‌ಲೈನ್ ಅನ್ನು ಕೂಡ ಫಿಕ್ಸ್ ಮಾಡಿತ್ತು. ಅಳವಡಿಕೆ ಮಾಡದವರಿಗೆ ದಂಡ ವಿಧಿಸಲಾಗುತ್ತೆ ಎಂದು ಸೂಚಿಸಲಾಗಿತ್ತು. 2 ವೀಲರ್ ಕೂಡ ಇದರಿಂದ ಹೊರತಲ್ಲ.
ಆದರೆ, ಹೊಸ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳು ಎಲ್ಲಿ ಸಿಗುತ್ತವೆ ಎಂಬ ಸ್ಪಷ್ಟ ಮಾಹಿತಿಯನ್ನು ನೀಡದಿರುವುದರಿಂದ ವಾಹನ ಸವಾರರು ಸಮಸ್ಯೆ ಅನುಭವಿಸುತ್ತಿದ್ದಾರೆ.
ಈವರೆಗೂ ರಾಜ್ಯದಲ್ಲಿ ಬರೀ 2.30 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ. 1950ರಿಂದಲೂ ಆಗಿರುವ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ.
ನ.17ರ ಒಳಗೆ ಒಂದೂವರೆ ಕೋಟಿ ವಾಹನಗಳಿಗೆ ನಾಮಫಲಕ ಅಳವಡಿಕೆ ಸಾಧ್ಯವಿಲ್ಲ. ಹೀಗಾಗಿ 2 ಅಥವಾ 3 ತಿಂಗಳು ಅವಧಿ ವಿಸ್ತರಿಸುವ ಬಗ್ಗೆ ಅಧಿಕಾರಿಗಳ ಹಂತದಲ್ಲಿ ಮಾತುಕತೆ ನಡೆದಿದೆ. ಎಚ್‌ಎಸ್‌ಆರ್‌ಪಿ ಅಳವಡಿಸಲು ರಾಜ್ಯಾದ್ಯಂತ 4000ಕ್ಕೂ ಅಧಿಕ ಡೀಲರ್ ಪಾಯಿಂಟ್ಗಳನ್ನು ಸಾರಿಗೆ ಇಲಾಖೆ ಗುರುತಿಸಿದೆ.