ಅಕ್ಟೋಬರ್ ಅಂತ್ಯಕ್ಕೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್ ಪ್ರೆಸ್ : ಸಂಸದ ನಳಿನ್ ಕುಮಾರ್

Prasthutha|

ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ.

- Advertisement -


ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಮಾನ್ಯ ಸಚಿವರನ್ನು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.
ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ನೀಡಿದ್ದಾರೆ.

Join Whatsapp