ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊವಿಡ್ ರೂಪಾಂತರ ಪತ್ತೆ | ಕಠಿಣ ತಪಾಸಣೆಗೆ ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೆ ಪತ್ರ

Prasthutha|

ನವದೆಹಲಿ: ದಕ್ಷಿಣ ಆಫ್ರಿಕಾ ಹೊಸ ಕೊವಿಡ್ -19 ರೂಪಾಂತರವು ವರದಿಯಾಗಿರುವ ಬೆನ್ನಲ್ಲೇ ಎಚ್ಚೆತ್ತಿರುವ ಭಾರತ ಸರಕಾರ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಕಠಿಣ ತಪಾಸಣೆ ಮತ್ತು ಪರೀಕ್ಷೆಯನ್ನು ನಡೆಸುವಂತೆ ರಾಜ್ಯಗಳಿಗೆ ಪತ್ರ ಬರೆದಿದೆ. ದಕ್ಷಿಣ ಆಫ್ರಿಕಾ ಹಾಂಗ್ ಕಾಂಗ್ ಮತ್ತು ಬೋಟ್ಸ್ವಾನಾದಿಂದ ಪ್ರಯಾಣಿಸುವ ಎಲ್ಲಾ ಪ್ರಯಾನಿಕರನ್ನು ಕಠಿಣ ತಪಾಸಣೆ ಮಾಡುವಂತೆ ಕೇಳಿಕೊಂಡಿದೆ.

- Advertisement -

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೊರೊನಾ ಪಾಸಿಟಿವ್ ಆಗಿರುವ ಪ್ರಯಾಣಿಕರ ಮಾದರಿಗಳನ್ನು ತಕ್ಷಣವೇ ಜೀನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿಗೆ ಕಳುಹಿಸಲು ಸೂಚಿಸಿದ್ದಾರೆ .

ರೂಪಾಂತರವು ಗಣನೀಯವಾಗಿ ಹೆಚ್ಚಿನ ಸಂಖ್ಯೆಯ ರೂಪಾಂತರಗಳನ್ನು ಹೊಂದಿದೆ ಎಂದು ವರದಿಯಾಗಿದೆ. ಹೀಗಾಗಿ ಇತ್ತೀಚೆಗೆ ಸಡಿಲಿಸಲಾದ ವೀಸಾ ನಿರ್ಬಂಧಗಳು ಮತ್ತು ಅಂತರರಾಷ್ಟ್ರೀಯ ಪ್ರಯಾಣದ ತೆರೆಯುವಿಕೆಯ ದೃಷ್ಟಿಯಿಂದ ದೇಶಕ್ಕೆ ಗಂಭೀರವಾದ ಸಾರ್ವಜನಿಕ ಆರೋಗ್ಯ ಪರಿಣಾಮವಾಗಲಿದೆ ಎಂದು ಹೇಳಿದ್ದಾರೆ.

- Advertisement -

ಬೋಟ್ಸ್ವಾನಾದಲ್ಲಿ3 ಪ್ರಕರಣ,ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣ ಮತ್ತು ಹಾಂಕ್ ಕಾಂಗ್ ನಲ್ಲಿ 1 ಪ್ರಕರಣದ ಕೊವಿಡ್-19 ರೂಪಾಂತರದ ಬಿ.1.1529 ರ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರವು (ಎನ್‌ಸಿಡಿಸಿ) ವರದಿ ಮಾಡಿದೆ ಎಂದು ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.



Join Whatsapp