April 8, 2021

ಭಾರತೀಯರಿಗೆ ಪ್ರವೇಶ ನಿರ್ಬಂಧಿಸಿದ ನ್ಯೂಜಿಲೆಂಡ್

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದ ಪ್ರಯಾಣಿಕರಿಗೆ ಎರಡು ವಾರಗಳ ಕಾಲ ನ್ಯೂಜಿಲೆಂಡ್ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ದಕ್ಷಿಣ ಏಷ್ಯಾ ದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.   ಇದು ಈ ದೇಶಗಳಲ್ಲಿರುವ ನ್ಯೂಜಿಲೆಂಡ್ ಪ್ರಜೆಗಳಿಗೂ ಅನ್ವಯವಾಗುತ್ತದೆ ಎಂದು ನ್ಯೂಜಿಲೆಂಡ್ ಸರ್ಕಾರ ತಿಳಿಸಿದೆ.

ನ್ಯೂಜಿಲೆಂಡ್ ನಲ್ಲಿ ಗುರುವಾರ 23 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇವರಲ್ಲಿ 17 ಮಂದಿ ಭಾರತದಿಂದ ಬಂದವರಾಗಿದ್ದಾರೆ.

“ಭಾರತದಿಂದ ಬರುವ ಪ್ರಯಾಣಿಕರಿಗೆ ನಾವು ನ್ಯೂಜಿಲೆಂಡ್‌ಗೆ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ ”ಎಂದು ಪ್ರಧಾನಿ ಜಸಿಂದಾ ಅರ್ಡೆರ್ನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 11ರಿಂದ 28ರವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಜಸಿಂದಾ ತಿಳಿಸಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!