ಹೊಸದಾಗಿ ಡಾಂಬರು ಹಾಕಿದ ರಸ್ತೆ ಕುಸಿತ: ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

Prasthutha|

ನವದೆಹಲಿ: ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು ಎಂದರು.

- Advertisement -

ರಸ್ತೆ ಕಾಮಗಾರಿ: ವಿವರ ನೀಡಿದರೆ ತನಿಖೆ

ಬಿಬಿಎಂಪಿ ರಸ್ತೆ ಹಾಕಿದ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ವಿವರಗಳನ್ನು ನೀಡಿದರೆ ತನಿಖೆ ಮಾಡಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.



Join Whatsapp