ಶಿವಮೊಗ್ಗ: ಎಂಟು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ.
ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು ಎಂದು ತಿಳಿದು ಬಂದಿದೆ.
ಆಗುಂಬೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.