ದೆಹಲಿ: ಯುಎಪಿಎ ಪ್ರಕರಣಕ್ಕೆಸಂಬಂಧಿಸಿ ತಮ್ಮ ಬಂಧನವನ್ನು ಹಿಂಪಡೆಯಲು ಮತ್ತು ರಿಮಾಂಡ್ ಗೆ ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಪುರಕಾಯಸ್ಥ ಅವರ ವಕೀಲ ಕಪಿಲ್ ಸಿಬಲ್ ಅವರಲ್ಲಿ ಈ ಬಗ್ಗೆ ಕೋರ್ಟ್ ಗೆ ಸಲ್ಲಿಕೆ ಮಾಡಲು ಹೇಳಿದ್ದು ತುರ್ತು ವಿಚಾರಣೆಯನ್ನು ನಿರ್ಧರಿಸುವುದಾಗಿ ಹೇಳಿದೆ.