ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಕ್ಕೆ NHAI ‘ಅವೈಜ್ಞಾನಿಕ’ ಕಾಮಕಾರಿ ಕಾರಣ: ಕೃಷ್ಣ ಬೈರೇಗೌಡ

Prasthutha|

ಬೆಂಗಳೂರು: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದ ಗುಡ್ಡ ಕುಸಿತಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸಿರುವ ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ.

- Advertisement -


ವಿಧಾನಸಭಾ ಅಧಿವೇಶನದಲ್ಲಿ ಅಂಕೋಲ ಅಪಘಾತದ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ನದಿ ಹಾಗೂ ಗುಡ್ಡದ ನಡುವೆ ರಾಷ್ಟ್ರೀಯ ಹೆದ್ದಾರಿ ಇದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕೆಲವರು ಸಣ್ಣ ಮಟ್ಟದ ಕ್ಯಾಂಟೀನ್ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಅಡುಗೆ ಅನಿಲ ಹೊತ್ತೊಯ್ಯುವ ಟ್ಯಾಂಕರ್ ಚಾಲಕರು ಟೀ ಕುಡಿಯಲು ವಾಹನ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ ಎಂದು ಹೇಳಿದರು.


ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ ಎಂದರು. ಅಪಘಾತದಲ್ಲಿ ಮೃತಪಟ್ಟವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ವಾಹನ ಚಾಲಕರು ನಮ್ಮ ರಾಜ್ಯದವರಲ್ಲ. ಆದರೂ, ಅವರು ಕೆಲಸದ ಮೇಲೆ ನಮ್ಮ ರಾಜ್ಯಕ್ಕೆ ಬಂದಿದ್ದು, ಈ ವೇಳೆ ದುರಾದೃಷ್ಟವಶಾತ್ ಅಪಘಾತ ಸಂಭವಿಸಿದೆ. ಹೀಗಾಗಿ ಅವರಿಗೂ ಪರಿಹಾರ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.



Join Whatsapp