ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಾರ್ಚ್15 ರವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.
ಸುಟ್ಟು ಗಾಯಗೊಂಡಿದ್ದ ಶಾರಿಕ್ ಇದೀಗ ಚೇತರಿಸಿಕೊಂಡಿದ್ದು ಆತನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಎನ್‌ಐಎ ಅಧಿಕಾರಿಗಳು ಕಸ್ಟಡಿಗೆ ಪಡೆದು ಶಾರಿಕ್ನ ವಿಚಾರಣೆ ಮಾಡಲಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್‌ನನ್ನು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್ 17ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಪಿಗೆ ಎನ್‌ಐಎ ಹಾಗೂ ಸ್ಥಳೀಯ ಪೊಲೀಸರ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.